ಕರ್ನಾಟಕ

karnataka

ETV Bharat / state

ಬೆಳ್ತಂಗಡಿ ಪೊಟ್ಟುಕೆರೆಯಲ್ಲಿ ಕೊಲೆ ಪ್ರಕರಣ: ಆರೋಪಿಗಳಿಬ್ಬರ ಬಂಧನ - Murder case: accused arrest

ಪೊಟ್ಟುಕೆರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

accused arrest
ಆರೋಪಿಗಳ ಬಂಧನ

By

Published : Jan 25, 2020, 7:46 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪೊಟ್ಟುಕೆರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಾರಾಯಣ ಯಾನೆ ರಮೇಶ್ (45) ಎಂಬವರನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಬೆಳ್ತಂಗಡಿ ಓಡಿಲ್ನಾಳ ಗ್ರಾಮದ ಅಣ್ಣು ಯಾನೆ ಅಣ್ಣಯ್ಯ (24) ಮತ್ತು ಕೇರಳ ರಾಜ್ಯದ ಕಾಸರಗೋಡು ನಿವಾಸಿ ಸಿರಾಜ್ (25) ಎಂಬಾತನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

ABOUT THE AUTHOR

...view details