ಮಂಗಳೂರು: ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಶಾಲೆಯ ಶಿಕ್ಷಕ ಯಾಕೂಬ್ ಕೊಯ್ಯೂರುಗೆ ವರ್ಚುವಲ್ ಕಾರ್ಯಕ್ರಮದ ಮೂಲಕ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಳ್ತಂಗಡಿಯ ಶಿಕ್ಷಕ ಯಾಕೂಬ್ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ - Best Teacher Award for yakub
ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಕ್ಷಕ ಯಾಕೂಬ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೇಂದ್ರ ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಪ್ರಶಸ್ತಿ ವಿತರಿಸಿದರು. ಈ ಸಂದರ್ಭ ಯಾಕೂಬ್ ಅವರ ಸಾಧನೆಗಳ ಬಗ್ಗೆ ಕಿರುಚಿತ್ರ ಪ್ರದರ್ಶಿಸಲಾಯಿತು.
ರಾಜ್ಯದಲ್ಲೇ ಮೊದಲ ಬಾರಿಗೆ ಗಣಿತ ಪ್ರಯೋಗಾಲಯವನ್ನು ಶಿಕ್ಷಕ ಯಾಕೂಬ್ ಅವರು ನಡ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಗಣಿತವನ್ನು ಸುಲಭವಾಗಿ ಬೋಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬೋಧನೆ, ಪ್ರಯೋಗ, ವಿಡಿಯೋಗಳನ್ನು ಹಂಚಿ ಪ್ರಶಂಸೆಗೆ ಪಾತ್ರವಾಗಿದ್ದಾರೆ.