ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಗುರುತಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಡಾ. ಡಿ. ವೀರೇಂದ್ರ ಹೆಗ್ಗಡೆಗೆ 'ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ' - ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ,
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಅನುಮಪ ಸೇವೆ ಗೌರವಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2019-20ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆಯಾದ ಗಣ್ಯರಿಗೆ ನಾಳೆ (ಬುಧವಾರ) ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ. ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
TAGGED:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ