ಕರ್ನಾಟಕ

karnataka

ETV Bharat / state

ಕೊಯಿಲ ಉಪವಲಯ ಅರಣ್ಯಾಧಿಕಾರಿ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ - Etv Bharat Kannada

ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು.

bhajarngdal activist protest in puttur
ಅರಣ್ಯಾಧಿಕಾರಿ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

By

Published : Dec 21, 2022, 7:19 PM IST

ಪುತ್ತೂರು (ದಕ್ಷಿಣ ಕನ್ನಡ):ಭಜನೆ ಮತ್ತು ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ವಿ.ಹಿಂ.ಪ, ಬಜರಂಗದಳದ ವತಿಯಿಂದ ಪುತ್ತೂರು ಅರಣ್ಯ ಇಲಾಖೆ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು.

ಭಜನೆಯಿಂದ ಪ್ರತಿಭಟನೆ ಆರಂಭಗೊಂಡಿದ್ದು, ಡಿಎಫ್ಒ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಅವರು ಆಗಮಿಸಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಂಜೀವ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.‌

ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವರನ್ನು ತಕ್ಷಣ ಅಮಾನತು ಮಾಡುವಂತೆ ಹಿಂದೂ ಸಂಘಟನೆ ಪಟ್ಟು ಹಿಡಿದಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಾನತಿನ ಭರವಸೆ ನೀಡಿದರು. ಆರಂಭದಲ್ಲಿ ಸಂಜೀವ ಪೂಜಾರಿ ಅವರಿಗೆ ಕಾರಣ ಕೇಳಿ ನೋಟಿಸ್ ಮಾಡಿ ಅವರ ಉತ್ತರದ ಬಳಿಕ ಅಮಾನತು ಕ್ರಮ ಕೈಗೊಳ್ಳಲಾಗುವುದು. ಅದಕ್ಕೂ ಮೊದಲು ಪ್ರತಿಭಟನಾಕಾರರ ಆಗ್ರಹದಂತೆ ಇವತ್ತಿನಿಂದಲೇ ಅವರಿಗೆ ರಜೆ ನೀಡಲಾಗುವುದು ಎಂದು ತಿಳಿಸಿದರು. ಬಳಿಕ ಹಿಂದೂ ಸಂಘಟನೆ ಮುಖಂಡರು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಇದನ್ನೂ ಓದಿ:ಸಮ್ಮೆದ್ ಶಿಖರ್ಜಿ ಪ್ರದೇಶ ಪ್ರವಾಸಿತಾಣಕ್ಕೆ ಜೈನ್ ಸಮಾಜ ವಿರೋಧ: ಪ್ರತಿಭಟನೆ

ABOUT THE AUTHOR

...view details