ಉಳ್ಳಾಲ :ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಬಕ್ರೀದ್ ಹಬ್ಬದಂದು ಎಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ನಡೆಯಲಿದೆ ಎಂದು ಸೈಯದ್ ಮದನಿ ದರ್ಗಾ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದರು.
ನಗದರ ಹಜ್ರತ್ ಶಾಲಾ ಆವರಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜೂ.8 ರಂದೇ ಧಾರ್ಮಿಕ ಕ್ಷೇತ್ರಗಳಿಗೆ ಜನರ ಪ್ರವೇಶಕ್ಕೆ ಅವಕಾಶ ಕೊಟ್ಟರೂ, ಸಮುದಾಯ ಸ್ವಯಂ ಆಗಿ ಜಾಗೃತಿ ಕಾಪಾಡಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿರಲಿಲ್ಲ ಎಂದರು.