ಕರ್ನಾಟಕ

karnataka

ETV Bharat / state

'ಧರ್ಮಪರ ಸರ್ಕಾರ ಎಷ್ಟು ಮುಖ್ಯವೋ, ಧರ್ಮಪರ ಶಿಕ್ಷಣ ಸಂಸ್ಥೆಗಳೂ ಅಷ್ಟೇ ಮುಖ್ಯ' - ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

ಪುತ್ತೂರಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ 70ನೇ ಶಿಕ್ಷಣ ಸಂಸ್ಥೆಯಾದ ವಿವೇಕಾನಂದ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

Bharathi swamiji visited putturu
ಪುತ್ತೂರಿಗೆ ಭೇಟಿ ನೀಡಿದ್ದ ಭಾರತೀ ಸ್ವಾಮೀಜಿ

By

Published : Nov 3, 2021, 6:57 PM IST

ಪುತ್ತೂರು:ಧರ್ಮಪರ ಸರ್ಕಾರಗಳು ಎಷ್ಟು ಮುಖ್ಯವೋ, ಧರ್ಮಪರ ಶಿಕ್ಷಣ ಸಂಸ್ಥೆಗಳು ಅಷ್ಟೇ ಮುಖ್ಯ. ಧರ್ಮ, ಸಂಸ್ಕೃತಿ ಆಧಾರಿತ ಶಿಕ್ಷಣ ದೇಶಕ್ಕೆ ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ 70ನೇ ಶಿಕ್ಷಣ ಸಂಸ್ಥೆಯಾದ ವಿವೇಕಾನಂದ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು.

ಸರ್ಕಾರಗಳು ಮೂಲಭೂತ ಸೌಕರ್ಯಗಳ ಕುರಿತಂತೆ ಬಹಿರಂಗ ಕಾರ್ಯಗಳನ್ನು ಮಾಡಿದರೆ, ಶಾಲೆಗಳು ಪ್ರತಿ ವಿದ್ಯಾರ್ಥಿಯ ಅಂತರಂಗವನ್ನು ನಿರ್ಮಾಣ ಮಾಡುವ ಕೆಲಸವನ್ನು ಮಾಡುತ್ತಿವೆ. ಸನಾತನ ಧರ್ಮ ಆಧಾರಿತ ಶಿಕ್ಷಣ ಪದ್ಧತಿ ಭಾರತದಲ್ಲಿ ಮತ್ತೆ ಜಾರಿಗೆ ಬರುತ್ತಿರುವುದು ಸಂತಸದ ವಿಚಾರ. ಭಾಷಾ ಮಾಧ್ಯಮ ಯಾವುದೇ ಇರಲಿ ಆದರೆ ಸಂಸ್ಕೃತಿ ಮತ್ತು ಸಂಸ್ಕಾರ ನಮ್ಮದಾಗಿರಲಿ ಎಂದು ಶ್ರೀಗಳು ಮಾರ್ಮಿಕವಾಗಿ ಹೇಳಿದರು.

ನೂತನ ಶಾಲಾ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಸಮಾಜದ ಮೂಲಕ ಶಿಕ್ಷಣ ಪದ್ಧತಿಯಲ್ಲಿ ಹೊಸ ವ್ಯವಸ್ಥೆಯನ್ನು ಹಿಂದೂ ಧರ್ಮ ಆಧಾರಿತವಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ನಡೆಸುತ್ತಿವೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್​​ ಅವರ ಪ್ರಯತ್ನಗಳು ದೇಶಕ್ಕೆ ಮಾದರಿಯಾಗಿವೆ ಎಂದರು.

ಸಮಾರಂಭದಲ್ಲಿ ಸಂಸದ ನಳಿನ್​ ಕುಮಾರ್ ಕಟೀಲ್​, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರಸಭಾಧ್ಯಕ್ಷ ಕೆ. ಜೀವಂಧರ್ ಜೈನ್, ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಯೋಗೀಶ್ ಆಚಾರ್ಯ ಮೊದಲಾದವರೂ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಭರತ್ ಪೈ, ಆಡಳಿತ ಮಂಡಳಿಯ ಅಧ್ಯಕ್ಷೆ ವಸಂತಿ ಕೆದಿಲ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ವಾರಾಂತ್ಯದವರೆಗೂ ರಾಜ್ಯದಲ್ಲಿ ಗುಡುಗುಸಹಿತ ಮಳೆ: ಯಲ್ಲೋ ಅಲರ್ಟ್​ ಘೋಷಣೆ

ABOUT THE AUTHOR

...view details