ಉಳ್ಳಾಲ(ದಕ್ಷಿಣ ಕನ್ನಡ): ಬೈಕ್ ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಾಯಗೊಂಡಿರುವ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ಸೋಮವಾರ ತಡರಾತ್ರಿ ವೇಳೆ ಸಂಭವಿಸಿದೆ.
ಬೆಂಗಳೂರಿನ ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ ಪುತ್ರ ನಿಶಾಂತ್ (22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ಇಬ್ಬರೂ ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟನ್೯ಶಿಪ್ ನಡೆಸುತ್ತಿದ್ದರು.
ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ ಬೈಕಿನಲ್ಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆಚ್ಚು ವಾಹನ ಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ 12.15ಕ್ಕೆ ಆದ ಅಪಘಾತ 12.30ರ ವೇಳೆ ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣ ಹಿಂಬದಿ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಓವರ್ಟೇಕ್ ಭರದಲ್ಲಿ ಬಿಎಂಟಿಸಿ ಬಸ್ಗೆ ಸಿಲುಕಿ ಬೈಕ್ ಸವಾರ ಸಾವು