ಕಡಬ(ಮಂಗಳೂರು): ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.
ಕಡಬದಲ್ಲಿ ಬೈಕ್ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ ಸವಾರ ಸಾವು - Bike accident news
ಬೈಕ್ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
Bike accident
ಸೋಮವಾರ ಬೆಳಗ್ಗೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ಬೈಕ್ಗಳ ನಡುವೆ ಅಪಘಾತದ ನಡೆದಿತ್ತು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಪುತ್ತೂರಿಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು.