ಪುತ್ತೂರು:ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಡುತ್ತಿದ್ದ ವೇಳೆ ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಮುಕ್ರಂಪಾಡಿ ಕಮ್ಮಾಡಿ ಪ್ಲೇವುಡ್ ಫ್ಯಾಕ್ಟರಿ ಬಳಿ ನಡೆದಿದೆ.
ಬೈಕ್ ಡಿಕ್ಕಿ ಹೊಡೆದು ಸೆಕ್ಯುರಿಟಿ ಗಾರ್ಡ್ ಸಾವು
ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಡುತ್ತಿದ್ದ ವೇಳೆ ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಮುಕ್ರಂಪಾಡಿ ಕಮ್ಮಾಡಿ ಪ್ಲೇವುಡ್ ಫ್ಯಾಕ್ಟರಿ ಬಳಿ ನಡೆದಿದೆ.
ಲಾರೆನ್ಸ್ ಡಿಸೋಜ(70) ಮೃತ ವ್ಯಕ್ತಿ. ಇವರು ನಗರದ ಮಾಯಿದೆ ದೇವುಸ್ ಚರ್ಚ್ನಲ್ಲಿ ಹದಿನೈದು ವರ್ಷಗಳಿಂದ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದರು. ಇವರು ನಿನ್ನೆ ತಮ್ಮ ಕೆಲಸ ಮುಗಿಸಿಕೊಂಡು ಮನೆ ಕಡೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಬೈಕ್ ಸವಾರ ಅವರನ್ನು ಪುತ್ತೂರು ಸಿಟಿ ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.