ಮಂಗಳೂರು: ನೇತ್ರಾವತಿ ಸೇತುವೆ ಬಳಿ ಬೈಕ್ ಪತ್ತೆಯಾಗಿದ್ದು, ಬೈಕ್ ಮಾಲೀಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಹಿನ್ನೆಲೆಯಲ್ಲಿ ಶೋಧ ಕಾರ್ಯಾರಂಭವಾಗಿದೆ.
ನೇತ್ರಾವತಿ ಸೇತುವೆ ಬಳಿ ಬೈಕ್ ಪತ್ತೆ: ನದಿಗೆ ಹಾರಿ ಯುವಕ ಆತ್ಮಹತ್ಯೆ ಶಂಕೆ - Netravathi river news
ನೇತ್ರಾವತಿ ಸೇತುವೆ ಬಳಿ ಬೈಕ್ ಪತ್ತೆಯಾಗಿದೆ. ಬೈಕ್ ಮಾಲೀಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರೆದಿದೆ.
Netravathi river
ಕುರ್ನಾಡು ನಿವಾಸಿ ಪ್ರವೀಣ್ (28) ಎಂಬುವವರಿಗೆ ಸೇರಿದ ಬೈಕ್ ಇದಾಗಿದ್ದು, ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಸಂಜೆ ಕೆಲಸದಿಂದ ಮನೆಗೆ ವಾಪಸ್ಸಾಗುವ ವೇಳೆ ನಾಪತ್ತೆಯಾಗಿದ್ದಾರೆ. ಬೈಕ್ ಪತ್ತೆ ಹಚ್ಚಿದ ಪೊಲೀಸರು ವಶಕ್ಕೆ ಪಡೆದು, ಆತನ ಮನೆಯವರಿಗೆ ಮಾಹಿತಿ ಮುಟ್ಟಿಸಿದ್ದಾರೆ.
ಪ್ರವೀಣ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಉಳ್ಳಾಲ ಪೊಲೀಸರು ಅನುಮಾನ ವ್ಯಕ್ತಪಡಿಸಿ ಶೋಧ ಕಾರ್ಯ ಶುರುಮಾಡಿದ್ದಾರೆ.