ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಅವರ ಜನ್ಮದಿನವನ್ನು ತಾಲೂಕಿನ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಸರಳವಾಗಿ ಆಚರಿಸಲಾಯಿತು.
ಬೆಳ್ತಂಗಡಿ; ರಾಜೀವ್ ಗಾಂಧಿ, ದೇವರಾಜ ಅರಸ್ ಜನ್ಮ ದಿನಾಚರಣೆ - Beltangady Mangalore latest news
ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿಂದು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಅವರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ದೇಶ ಹಾಗೂ ರಾಜ್ಯದ ಪ್ರಗತಿಗೆ ಇವರು ನೀಡಿದ ಕೊಡುಗೆ ಅಪಾರ ಎಂದು ನುಡಿದರು. ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ್ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ. ಗೌಡ, ಎಪಿಎಂಸಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ನಮಿತಾ, ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ ಹಾಗು ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು ಸಂಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.