ಕಡಬ/ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಮರ್ದಾಳ ಗ್ರಾಮ ಪಂಚಾಯತ್‌ನ 102ನೇ ನೆಕ್ಕಿಲಾಡಿ ಗ್ರಾಮದ 2ನೇ ವಾರ್ಡ್‌ನ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸರ್ವೋತ್ತಮ ಗೌಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಮರ್ದಾಳ ಗ್ರಾಪಂ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ - Sullia latest news
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಮರ್ದಾಳ ಗ್ರಾಮ ಪಂಚಾಯತ್‌ನ 102ನೇ ನೆಕ್ಕಿಲಾಡಿ ಗ್ರಾಮದ 2ನೇ ವಾರ್ಡ್‌ನ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಬೆಜೆಪಿ ಬೆಂಬಲಿತ ಅಭ್ಯರ್ಥಿ ಅವಿರೋಧ ಆಯ್ಕೆ
ನ. 12ರಂದು ನಡೆಯಬೇಕಿದ್ದ ಉಪ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ 102ನೇ ನೆಕ್ಕಿಲಾಡಿ ಗ್ರಾಮದ ಪಂಜೋಡಿ ನಿವಾಸಿ ಸರ್ವೋತ್ತಮ ಗೌಡ, ಅಚ್ಚಿಮನೆ ನಿವಾಸಿ ಚಂದ್ರಶೇಖರ ಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೇರಂಜ ಮನೆ ನಿವಾಸಿ ಭವಾನಿ ಶಂಕರ ಬಿ. ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಚಂದ್ರಶೇಖರ ಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭವಾನಿ ಶಂಕರ ನಾಮಪತ್ರ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಸರ್ವೋತ್ತಮ ಗೌಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
Last Updated : Nov 5, 2019, 7:27 AM IST