ಉಜಿರೆ (ದಕ್ಷಿಣಕನ್ನಡ):ಜ.31ರಂದು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.
ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಪೂರ್ವಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ಬಿಜೆಪಿ ಅಭಿನಂದನಾ ಸಮಾರಂಭದಲ್ಲಿ ಗ್ರಾ.ಪಂ.ಚುನಾವಣೆ ವಿಜೇತರು, ಸ್ಪರ್ಧಿಗಳು ಹಾಗೂ ಕಾರ್ಯಕರ್ತರಿಗೆ ಸನ್ಮಾನಿಸಲಾಗುವುದು. ಜೊತೆಗೆ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಲು ಸಭೆ ನಡೆಯಲಿದೆ ಎಂದರು.