ಮಂಗಳೂರು: ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿದ್ದು, ಈ ಹಿನ್ನೆಲೆ ಸಿದ್ಧತೆ ನಡೆಯುತ್ತಿದೆ.
ಮಂಗಳೂರು: ನಾಳೆ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಬಿಗಿ ಬಂದೋಬಸ್ತ್, ತಪಾಸಣೆ - ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಂಗಳೂರಿನಲ್ಲಿ ಪೊಲೀಸ್ ಬಂದೋಬಸ್ತ್
ಮಂಗಳೂರಿನಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿರುವ ಹಿನ್ನೆಲೆ ಸಭೆ ನಡೆಯುವ ಸ್ಥಳದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೇಂದ್ರ ಸಚಿವರು, ಬಿಜೆಪಿಯ ಪ್ರಮುಖ ನಾಯಕರು ಹಾಗೂ ರಾಜ್ಯ ಬಿಜೆಪಿ ಪ್ರಮುಖ ನಾಯಕರು ಸೇರಿದಂತೆ 120 ಮಂದಿ ಭಾಗವಹಿಸಲಿದ್ದಾರೆ. ಸಿಎಂ ಸೇರಿದಂತೆ ಹೆಚ್ಚಿನ ಎಲ್ಲಾ ಪ್ರಮುಖ ನಾಯಕರು ಇಂದು ಸಂಜೆಯೇ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆ ಸಭೆ ನಡೆಯುವ ಸ್ಥಳ ಹಾಗೂ ಆಸುಪಾಸಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಡಾಗ್ ಸ್ಕ್ವಾಡ್ ತಪಾಸಣೆ ನಡೆಯಿತು.
ಇನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಿಂದ ಕಾರ್ಯಕಾರಿಣಿ ಸಭೆ ನಡೆಯುವಲ್ಲಿಯವರೆಗೆ ಸಂಪೂರ್ಣ ಕೇಸರಿಮಯವಾಗಿದ್ದು, ಅಲ್ಲಲ್ಲಿ ಬಿಜೆಪಿಯ ಧ್ವಜ, ಪ್ರಮುಖರ ಕಟೌಟ್, ಬಂಟಿಂಗ್ಸ್ ರಾರಾಜಿಸುತ್ತಿವೆ.
ನಿನ್ನೆಯೇ ಸಭೆ ನಡೆಯುವ ಸಭಾಂಗಣವನ್ನು ಪೂರ್ತಿ ಸ್ಯಾನಿಟೈಸ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕುರ್ಚಿಗಳ ನಡುವೆ ಅಂತರ ಕಾಯ್ದುಕೊಳ್ಳಲಾಗಿದೆ.