ಕರ್ನಾಟಕ

karnataka

ETV Bharat / state

ಎರಡು ದಶಕಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ: ಸುದರ್ಶನ ಮೂಡುಬಿದಿರೆ - ಎರಡು ದಶಕಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ರಾಜ್ಯ ಬಿಜೆಪಿಯ 120 ಮಂದಿ ಪ್ರಮುಖರು ಈ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಘಟನೆಗೆ ಪೂರಕವಾಗಿರುವ ಕಾರ್ಯಯೋಜನೆಯನ್ನು ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿಯವರಾದ ಅರುಣ್ ಕುಮಾರ್ ಜಿ. ಈ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ.

BJP executive meeting in Mangalore
ಎರಡು ದಶಕಗಳ ಬಳಿಕ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

By

Published : Nov 1, 2020, 6:24 PM IST

ಮಂಗಳೂರು: ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಎರಡು ದಶಕಗಳ ಬಳಿಕ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ನಡೆಯಲಿದ್ದು, ಸಿಎಂ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.

ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ‌ಅವರು, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕಾರಣಿ ಸಭೆ ನಡೆಯಲಿದೆ.‌

ನವೆಂಬರ್ 5 ರಂದು ನಗರದ ರಮಣ ಪೈ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬಿಜೆಪಿಯ ಜಿಲ್ಲೆಯ ಕಾರ್ಯಕರ್ತರ ತಂಡ ಹಾಗೂ ಒಂಬತ್ತು‌ ಮಂಡಲದ ತಂಡ ಕಾರ್ಯಕಾರಿಣಿ ಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಬೇಕೆಂದು ಉತ್ಸುಕತೆಯಿಂದ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ಅಂದು ವಿವಿಧ ಕಾರ್ಯಯೋಜನೆಗಳ ಮೂಲಕ ಈ ಸಭೆ ನಡೆಯುತ್ತದೆ ಎಂದು ಸುದರ್ಶನ ಮೂಡುಬಿದಿರೆ ಹೇಳಿದರು.

ರಾಜ್ಯ ಬಿಜೆಪಿಯ 120 ಮಂದಿ ಪ್ರಮುಖರು ಈ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಘಟನೆಗೆ ಪೂರಕವಾಗಿರುವ ಕಾರ್ಯಯೋಜನೆಯನ್ನು ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿಯವರಾದ ಅರುಣ್ ಕುಮಾರ್ ಜಿ. ಈ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಕೋರ್ ಕಮಿಟಿಯ ಸಭೆ, ಸಂಘಟನಾತ್ಮಕ ವಿಚಾರಗಳು, ಕಾರ್ಯಯೋಜನೆಯ ಅನುಷ್ಠಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಕಾರ್ಯಕಾರಿಣಿ ಸಭೆಯನ್ನು ಯಶಸ್ವಿ ಮಾಡಲು ಈಗಾಗಲೇ 16 ತಂಡಗಳನ್ನು ನಿಯುಕ್ತಿ ಮಾಡಲಾಗಿದೆ ಎಂದು ಸುದರ್ಶನ ಮೂಡುಬಿದಿರೆ ಹೇಳಿದರು.

ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್, ಸಂಜೀವ ಮಠಂದೂರು, ಮೂಡಾ ಅಧ್ಯಕ್ಷ ‌ರವಿಶಂಕರ್ ಮಿಜಾರ್, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details