ಮಂಗಳೂರು:''ಬಿಜೆಪಿ ಸರ್ಕಾರವು ಹನುಮಂತ ಮತ್ತು ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತದೆ. ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ'' ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದರು. ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ''ಕರ್ನಾಟಕ ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವ ಪ್ರಸ್ತಾವದ ಬಗ್ಗೆ ಮಾತನಾಡಿದ ಅವರು, ''ರಾಜಸ್ಥಾನದಲ್ಲಿ ಜಾರಿಗೆ ತಂದಿರುವ ಹಳೆಯ ಪಿಂಚಣಿ ಯೋಜನೆ, 25 ಲಕ್ಷ ರೂ.ವರೆಗಿನ ಉಚಿತ ಆರೋಗ್ಯ ವಿಮೆಯಂತಹ ಯೋಜನೆಗಳನ್ನು ಕರ್ನಾಟಕದಲ್ಲೂ ಪುನರಾವರ್ತಿಸಬೇಕು ಎಂದ ಅವರು ಬಿಜೆಪಿಯ ಪ್ರಣಾಳಿಕೆ ನಕಲಿ'' ಅಂತಾ ಹೇಳಿದರು.
''ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ದೇಶದಲ್ಲಿ ಶೇ.40ರಷ್ಟು ಕಮೀಷನ್ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಏಕೈಕ ಸರ್ಕಾರವಾಗಿದೆ. ಬಿಜೆಪಿ ಹಿಂದಿನ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇಂದಿಗೂ ಆ ಭರವಸೆಯನ್ನು ಈಡೇರಿಸಿಲ್ಲ. ಬಿಜೆಪಿ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರೂ ಅದನ್ನು ಸಹ ಇದುವರೆಗೂ ಈಡೇರಿಸಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಬಿಜೆಪಿಗೆ ಜನಾದೇಶದಲ್ಲಿ ನಂಬಿಕೆಯಿಲ್ಲ. ಕುದುರೆ ವ್ಯಾಪಾರದ ಮೂಲಕ ಕರ್ನಾಟಕ, ಗೋವಾ ಮತ್ತು ಇತರ ರಾಜ್ಯಗಳಲ್ಲಿ ದೇಶದ ಅನೇಕ ಸರ್ಕಾರಗಳನ್ನು ಉರುಳಿಸಿದೆ'' ಹಾಗೂ ಹೊಸ ಸರ್ಕಾರಗಳನ್ನು ರಚಿಸಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಆರೋಪಿಸಿದರು.
ಇದನ್ನೂ ಓದಿ:ಬಿಜೆಪಿ ಡಬಲ್ ಎಂಜಿನ್ ಸರ್ಕಾರ ಅಲ್ಲ, ಭ್ರಷ್ಟ ಸರ್ಕಾರ: ಮಹಾರಾಷ್ಟ್ರ ಮಾಜಿ ಸಿಎಂ ಪೃಥ್ವಿರಾಜ್ ಚೌಹಾಣ್ ವಾಗ್ದಾಳಿ