ಬಂಟ್ವಾಳ: ಕಳೆದ ಎರಡು ದಿನಗಳ ಹಿಂದೆ ನಡೆದ ವಿಟ್ಲ ಪಟ್ಟಣ ಪಂಚಾಯತ್ ಸಭೆಯಲ್ಲಿ ಬಿಜೆಪಿಯಿಂದ ಆಯ್ಕೆಗೊಂಡ 12 ಸದಸ್ಯರಲ್ಲಿ 8 ಮಂದಿ ಗೈರು ಹಾಜರಾಗಿದ್ದು, ಪಕ್ಷದಲ್ಲಿ ಅಸಮಾಧಾನ ಇದೆಯೇ ಎಂಬ ಅನುಮಾನ ಹುಟ್ಟಿಸಿದೆ.
ವಿಟ್ಲ ಪಟ್ಟಣ ಪಂಚಾಯತ್ ಸಭೆಗೆ ಬಿಜೆಪಿ ಸದಸ್ಯರು ಗೈರು - Bantwala Mangalore latest news
ಸಭೆಯಲ್ಲಿ 12 ಬಿಜೆಪಿ ಸದಸ್ಯರ ಪೈಕಿ 8 ಮಂದಿ ಗೈರು ಹಾಜರಾಗಿದ್ದು ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಆದರೆ ಬಿಜೆಪಿ ಪ್ರಮುಖರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ..
![ವಿಟ್ಲ ಪಟ್ಟಣ ಪಂಚಾಯತ್ ಸಭೆಗೆ ಬಿಜೆಪಿ ಸದಸ್ಯರು ಗೈರು Meeting](https://etvbharatimages.akamaized.net/etvbharat/prod-images/768-512-07:40:17:1596377417-kn-mng-bantwal-04-vittla-photo-kac10019-02082020174258-0208f-1596370378-83.jpg)
Meeting
ಅಧ್ಯಕ್ಷೆ ದಮಯಂತಿ ಅಧ್ಯಕ್ಷತೆಯಲ್ಲಿ ನಡೆದ ಪಟ್ಟಣ ಪಂಚಾಯತ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಅಬ್ದುಲ್ ರಹಿಮಾನ್, ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಭೆಗೆ ಅನೇಕ ಮಂದಿ ಸದಸ್ಯರು ಹಾಜರಾಗಿಲ್ಲ. ಸದಸ್ಯರು ಹಾಜರಾಗದಿರುವ ವಿಚಾರ ಅವರಿಗೆ ಬಿಟ್ಟದ್ದು ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಹೇಳಿದ್ದಾರೆ.
ಸಭೆಯಲ್ಲಿ ಉಪಾಧ್ಯಕ್ಷ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷೆ ಸಹಿತ 8 ಮಂದಿ ಬಿಜೆಪಿ ಸದಸ್ಯರು ಗೈರು ಹಾಜರಾಗಿದ್ದರು. ವಿಟ್ಲ ಮಹಾಶಕ್ತಿ ಕೇಂದ್ರದ ಆಯ್ಕೆ ಪ್ರಕ್ರಿಯೆ ಇದಕ್ಕೆ ಕಾರಣ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.