ಮಂಗಳೂರು: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಇಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಜನಾರ್ದನ ಪೂಜಾರಿ ಕಾಲಿಗೆರಗಿ ಆಶೀರ್ವಾದ ಪಡೆದ ನಳಿನ್ ಕುಮಾರ್ - blessings
ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು, ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಪೂಜಾರಿ ಆಶೀರ್ವಾದ ಪಡೆದ ನಳಿನ್ ಕುಮಾರ್
ಸಂಸದ ನಳಿನ್ ಕುಮಾರ್ ತಮ್ಮ ಬೆಂಬಲಿಗರೊಂದಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಅವರು, ಪೂಜಾರಿಯವರ ಕಾಲಿಗೆರಗಿ ಆಶೀರ್ವಾದ ಪಡೆದರು.
ಈ ಸಂದರ್ಭ ದೇವರು ಒಳ್ಳೆಯದು ಮಾಡಲಿ ಎಂದು ಜನಾರ್ದನ ಪೂಜಾರಿಯವರು ಆಶೀರ್ವಾದ ಮಾಡಿದರು.