ಮಂಗಳೂರು: ಜು.31ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರೊಂದಿಗೆ ವಿಧಾನ ಪರಿಷತ್ ಮಾಜಿ ಸಚಿವ ಡಿಸೋಜ ಭಾಗವಹಿಸಿದ್ದರು. ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ಎಂದು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಪ್ರಶ್ನಿಸಿದ್ದಾರೆ.
'ಡಿಕೆಶಿಯವರಿಗೆ ಕ್ವಾರಂಟೈನ್ ನಿಯಮ ಅನ್ವಯಿಸುವುದಿಲ್ಲವೇ ?' - latest congress news
ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶ ಕೈಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆ ಸುತ್ತಾಡಿದ ಡಿಸೋಜ ಅವರಿಗೆ ಕೊರೊನಾ ದೃಢ ಪಟ್ಟಿದೆ. ಇವರ ಸಂಪರ್ಕದಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಕ್ವಾರಂಟೈನ್ ಯಾವಾಗ ಎಂದು ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಕಿಡಿಕಾರಿದ್ದಾರೆ.

ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್
ಜು.31ರ ಸಂಜೆ ಡಿಸೋಜ ಗಂಟಲು ದ್ರವ ಪರೀಕ್ಷೆಗೆ ಒಳಗಾಗಿದ್ದರು. ಆ.1ರಂದು ಅವರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.
ಹಾಗಾದರೆ ಕಾಂಗ್ರೆಸ್ ನಾಯಕರು ಯಾವಾಗ ಕ್ವಾರಂಟೈನ್ ಆಗುತ್ತಾರೆ? ಇವರಿಗೆ ಈ ನೆಲದ ಕಾನೂನು ಅನ್ವಯವಾಗುವುದಿಲ್ಲವೆ? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರಿಗೆ ವಿನಾಯಿತಿ ಇದೆಯೇ? ಎಂಬುದನ್ನು ಕಾಂಗ್ರೆಸ್ ನಾಯಕರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಕಿಡಿಕಾರಿದ್ದಾರೆ.