ಕರ್ನಾಟಕ

karnataka

ETV Bharat / state

ಮಂಗಳೂರು: ಮಕ್ಕಳ ಲಸಿಕಾಭಿಯಾನಕ್ಕೆ ಕಟೀಲ್‌ ಚಾಲನೆ - ಮಕ್ಕಳಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕಟೀಲ್​ ಚಾಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ಉದ್ಘಾಟಿಸಿದರು.

BJP State President Nalin Kumar kateel inaugurates vaccine
ಮಂಗಳೂರಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

By

Published : Jan 3, 2022, 2:50 PM IST

Updated : Jan 3, 2022, 5:33 PM IST

ಮಂಗಳೂರು: ವಿದ್ಯಾರ್ಥಿಗಳು ಮೊದಲು ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು. ಹಾಗೆಯೇ ಮನೆಯಲ್ಲಿ ಯಾರಾದರೂ ಲಸಿಕೆ ಪಡೆಯದಿದ್ದಲ್ಲಿ ಅವರಲ್ಲೂ ಜಾಗೃತಿ ಮೂಡಿಸಿ ಆಸ್ಪತ್ರೆಗೆ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ನಳಿನ್ ಕುಮಾರ್ ಕಟೀಲ್​​ ಹೇಳಿದರು.

ದ.ಕ.ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಕುಟುಂಬ‌ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಜಿಲ್ಲೆಯಲ್ಲಿ ಇಂದು ಒಂದೇ ದಿನ 25 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಮುಂದೆ 1ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಮುಟ್ಟುತ್ತೇವೆ. ಕೋವಿಡ್ ಸೋಂಕಿನ ಮೂರನೆ ಅಲೆ ಎದುರಿಸುವಲ್ಲಿ ಭಾರತ ಸರ್ವ ಸನ್ನದ್ಧವಾಗಿದೆ. ಜನತೆ ಯಾವುದೇ ಭೀತಿಗೊಳಗಾಗುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ಹಾಗೂ ಎಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಆದ್ದರಿಂದ ವಿದ್ಯಾರ್ಥಿಗಳು ಕೋವಿಡ್ ಸೋಂಕು ಹರಡದಂತೆ ಮಾಸ್ಕ್, ಸಾಮಾಜಿಕ ಅಂತರ ಕಾಯುವ ನಿಟ್ಟಿನಲ್ಲಿ ಮನೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳು 15 ರಿಂದ 18 ವರ್ಷದೊಳಗಿನವರಾಗಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಾಲೇಜುಗಳು ಹೆಚ್ಚಿದ್ದು ಈ ಗುರಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಕೊವ್ಯಾಕ್ಸಿನ್​ ಲಸಿಕೆ ನೀಡಲು ಸರ್ವ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮ.ನ.ಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಡಿಎಚ್ಒ ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನ: ಸಿಎಂ ಚಾಲನೆ

Last Updated : Jan 3, 2022, 5:33 PM IST

For All Latest Updates

TAGGED:

ABOUT THE AUTHOR

...view details