ಮಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಂಡ ಬಳಿಕ ಸುಳ್ಳು ಹೇಳಿ ದೇಶದಲ್ಲಿ ಗಲಭೆ ಸೃಷ್ಟಿಸುವ ಕಾರ್ಯ ವಿರೋಧ ಪಕ್ಷಗಳಿಂದ ನಡೆಯುತ್ತಿದೆ. ಮೋದಿ ಸರಕಾರದ ಆಡಳಿತಕ್ಕೆ ಕಪ್ಪು ಚುಕ್ಕೆಗಳನ್ನು ಇಡುವ ತಂತ್ರವನ್ನು ಅಪಪ್ರಚಾರಗಳ ಮೂಲಕ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆರೋಪಿಸಿದರು.
ನೆಹರೂ ಕಾಲದಲ್ಲಿ ಪೌರತ್ವ ನೀಡಬೇಕೆಂದಿದ್ದವರು ಈಗ ತಿರುಗಿ ಬಿದ್ದಿದ್ದೇಕೆ?: ನಳಿನ್ ಪ್ರಶ್ನೆ - ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸುದ್ದಿ
ಕಳೆದ ಆರು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರದ ವಿರುದ್ಧ ಒಂದೇ ಒಂದು ಹೋರಾಟ ಮಾಡಲು ವಿರೋಧ ಪಕ್ಷಗಳಿಗೆ ಅಸ್ತ್ರಗಳು ದೊರಕಲಿಲ್ಲ. ನೆಹರೂ ಕಾಲದಿಂದಲೂ ಲೋಕಸಭೆಯಲ್ಲಿ ಪೌರತ್ವ ಕೊಡಬೇಕೆಂದು ಹೇಳುತ್ತಿದ್ದ ಕಾಂಗ್ರೆಸ್ ಇಂದು ರಾಜಕೀಯ ಮಾಡಲು ವಿರೋಧ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.
ನಳೀನ್ ಕುಮಾರ್ ಕಟೀಲು
ನಗರದ ಕೊಡಿಯಾಲ್ ಬೈಲ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರದ ವಿರುದ್ಧ ಒಂದೇ ಒಂದು ಹೋರಾಟ ಮಾಡಲು ವಿರೋಧ ಪಕ್ಷಗಳಿಗೆ ಅಸ್ತ್ರಗಳು ದೊರಕಲಿಲ್ಲ. ನೆಹರೂ ಕಾಲದಿಂದಲೂ ಲೋಕಸಭೆಯಲ್ಲಿ ಪೌರತ್ವ ಕೊಡಬೇಕೆಂದು ಹೇಳುತ್ತಿದ್ದ ಕಾಂಗ್ರೆಸ್ ಇಂದು ರಾಜಕೀಯ ಮಾಡಲು ವಿರೋಧ ಮಾಡುತ್ತಿದೆ ಎಂದು ಟೀಕಿಸಿದರು.