ಮಂಗಳೂರು: ಈ ಹಿಂದೆ ಕಾಂಗ್ರೆಸ್ ಪ್ರಾಬಲ್ಯವಿದ್ದ ಮೂಡಬಿದ್ರೆ ಪುರಸಭೆಯಲ್ಲಿ ಕಮಲ ಅರಳಿದೆ. ಮೂಡಬಿದ್ರೆ ಪುರಸಭೆಗೆ ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪ್ರಾಬಲ್ಯವಿದ್ದ ಮೂಡಬಿದ್ರೆ ಪುರಸಭೆಯಲ್ಲಿ ಅರಳಿದ ಕಮಲ! - municipal election 2020
ಮೂಡಬಿದ್ರೆ ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಪ್ರಸಾದ್ ಕುಮಾರ್ ಅಧ್ಯಕ್ಷರಾಗಿ, ಸುಜಾತ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿತ್ತು. ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗಳಿಸಿದರೆ, ಬಿಜೆಪಿ 12 ಸ್ಥಾನಗಳನ್ನು ಗಳಿಸುವ ಮೂಲಕ ಗದ್ದುಗೆ ಏರಿದೆ.
ಮೂಡಬಿದ್ರೆ ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಪ್ರಸಾದ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿಯ ಸುಜಾತ ಆಯ್ಕೆಯಾಗಿದ್ದಾರೆ. 2019ರಲ್ಲಿ ಮೂಡಬಿದ್ರೆ ಪುರಸಭೆಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಮತ್ತು ಬಿಜೆಪಿ 12 ಸ್ಥಾನಗಳನ್ನು ಗಳಿಸಿತ್ತು. ಒಂದು ವರ್ಷದ ಹಿಂದೆ ಚುನಾವಣೆ ನಡೆದಿದ್ದರೂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದಿರಲಿಲ್ಲ.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿ ನಿಗದಿಪಡಿಸಿ ಇಂದು ಚುನಾವಣೆ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಪಿ.ಕೆ.ಥೋಮಸ್, ಬಿಜೆಪಿಯಿಂದ ಪ್ರಸಾದ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಮಮತಾ, ಬಿಜೆಪಿಯಿಂದ ಸುಜಾತ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಪ್ರಸಾದ್ ಕುಮಾರ್ ಅಧ್ಯಕ್ಷರಾಗಿ, ಸುಜಾತ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.