ಪುತ್ತೂರು:ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಇಂದು ಭೇಟಿ ನೀಡಿದರು.
ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಬಿ ಎಲ್ ಸಂತೊಷ್ ಅವರು ದೇವರ ದರ್ಶನ ಪಡೆದ ಬಳಿಕ ದೇವಳದ ಅಭಿವೃದ್ಧಿ ಕುರಿತು ವ್ಯವಸ್ಥಾಪನಾ ಸಮಿತಿಯವರೊಂದಿಗೆ ಮಾಹಿತಿ ಪಡೆದುಕೊಂಡರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಅವರು ಶಾಲು ಹೊದಿಸಿ ಗೌರವಿಸಿದರು.