ಮಂಗಳೂರು: ಪ್ರತಿಕೂಲ ಹವಾಮಾನದಿಂದಾಗಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಪಣಂಬೂರಿನಿಂದ ಸುಮಾರು 90 ನಾಟಿಕಲ್ ಮೈಲ್ ದೂರದಲ್ಲಿ ಆಳ ಸಮುದ್ರದಲ್ಲಿ ಘಟನೆ ಜರುಗಿದೆ.
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್- ವಿಡಿಯೋ ನೋಡಿ
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಬೋಟ್ ಮುಳುಗಿದೆ.
ಮೀನುಗಾರಿಕೆಗೆ ತೆರಳಿದ್ದ ವೇಳೆ ಮುಳುಗಿತು ಬೋಟ್
ಪ್ರತಿಕೂಲ ಹವಾಮಾನದಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಇದರಿಂದಾಗಿ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 11 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ. ಈ ಬೋಟ್ ಕೃಷ್ಣ ಕುಮಾರ್ ಎಂಬುವರಿಗೆ ಸೇರಿದ್ದಾಗಿದೆ.
ಇದನ್ನೂ ಓದಿ: ಚಿಂತಾಮಣಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ- ವಿಡಿಯೋ
Last Updated : Aug 7, 2022, 5:13 PM IST