ಕರ್ನಾಟಕ

karnataka

ETV Bharat / state

ಕೊರೊನಾ ಪ್ರಕರಣಗಳ ಹೆಚ್ಚಳ: ಬೊಳಿಯಾರು ಪ್ರದೇಶ ಕಂಟೈನ್ಮೆಂಟ್ ಝೋನ್ - Boliyaru Area Containment Zone

ಬೊಳಿಯಾರು ಪ್ರದೇಶದಲ್ಲಿ 16 ಮನೆಗಳಿದ್ದು, ಅದರಲ್ಲಿ 14 ಮನೆಗಳ ಸುಮಾರು 34 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಆ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್​ ಎಂದು ಘೋಷಿಸಲಾಗಿದೆ.

Boliyaru Area Containment Zone
ಬೊಳಿಯಾರು ಪ್ರದೇಶ ಕಂಟೈನ್ಮೆಂಟ್ ಝೋನ್

By

Published : May 3, 2021, 8:40 AM IST

ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು ತಾಲೂಕು ಆಡಳಿತದ ಸೂಚನೆಯಂತೆ ಆ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್​ ಎಂದು ಘೋಷಿಸಲಾಗಿದೆ.

ಬೊಳಿಯಾರು ಪ್ರದೇಶದಲ್ಲಿ 16 ಮನೆಗಳಿದ್ದು, ಅದರಲ್ಲಿ 14 ಮನೆಗಳ ಸುಮಾರು 34 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಇಲ್ಲಿನ ಮುಖ್ಯ ರಸ್ತೆಯನ್ನು ಮುಚ್ಚಲಾಗಿದ್ದು, ಬೊಳಿಯಾರು ಪ್ರದೇಶದವರು ಯಾರೂ ಕೂಡ 10 ದಿನಗಳವರೆಗೆ ಹೊರಗೆ ಹೋಗುವಂತಿಲ್ಲ. ಅಲ್ಲದೇ ಸದರಿ ಪ್ರದೇಶಕ್ಕೆ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ ಅಗತ್ಯ ನಿತ್ಯದ ವಸ್ತುಗಳಿಗೆ ಗ್ರಾಮ ಪಂಚಾಯಿತಿಯಿಂದ ಕ್ರಮ ವಹಿಸಲಾಗುವುದು ಎಂದು ಪಂಚಾಯಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದಾರೆ. ಅಲ್ಲದೇ ಈ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಯಿಂದ ಹಾಗೂ ಪೊಲೀಸ್ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ತುರ್ತು ಜಾಗೃತಿ ಸಭೆ:

ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಜಯ ಮೋನಪ್ಪ ಗೌಡ ನೇತೃತ್ವದಲ್ಲಿ ಭಾನುವಾರ ತುರ್ತು ಜಾಗೃತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಕೊರೊನಾ ಸೋಂಕು ತಡೆಗಟ್ಟುವಿಕೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ತುರ್ತು ಸಭೆಯಲ್ಲಿ ಅಂಗಡಿಗಳು ಮುಂಗಟ್ಟುಗಳು ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಯಿತು. ಹೊರ ಜಿಲ್ಲೆಯವರ ಮದುವೆ ಸಮಾರಂಭಗಳಿಗೆ ಅವಕಾಶವಿಲ್ಲ, ಸಂಘಸಂಸ್ಥೆಗಳ ಸಭೆಗೆ ಅವಕಾಶವಿಲ್ಲ ಎಂದು ತೀರ್ಮಾನಿಸಲಾಯಿತು.

ವಾಹನಗಳಲ್ಲಿ ಸಾರಿಗೆ ನಿಯಮ ಪಾಲಿಸಬೇಕು. ಸದ್ಯ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನರು ಎಚ್ಚರಿಕೆ ವಹಿಸಿ. ಸಾಧ್ಯವಾದಷ್ಟು ಮನೆಗಳಲ್ಲಿಯೇ ಇದ್ದು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಯಿತು.

ಈ ವೇಳೆ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಪಿಡಿಒ ಉಮೇಶ್ ಸೇರಿದಂತೆ ಇತರರರು ಉಪಸ್ಥಿತರಿದ್ದರು.

ABOUT THE AUTHOR

...view details