ಕರ್ನಾಟಕ

karnataka

ETV Bharat / state

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ - ಮಂಗಳೂರು ಸುದ್ದಿ

ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ.

ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ
ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ

By

Published : Sep 3, 2020, 9:46 AM IST

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.

ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ. ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ಆತನ ಮಂಪರು ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

2020ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಫೋಟಗೊಳಿಸಿತ್ತು. ಅದಾದ ಬಳಿಕ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದು, ತನಿಖೆಯ ಭಾಗವಾಗಿ ಇದೀಗ ಮಂಪರು ಪರೀಕ್ಷೆ ನಡೆಯುತ್ತಿದೆ.

ABOUT THE AUTHOR

...view details