ಕರ್ನಾಟಕ

karnataka

By

Published : Sep 18, 2022, 7:31 PM IST

ETV Bharat / state

ಮಂಗಳೂರು: ಮದರಸಾ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ

ಮದರಸಾದ ಶಿಕ್ಷಕ ಬಾಲಕನೋರ್ವನಿಗೆ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದ್ದು ಪೋಷಕರು ಪೊಲೀಸರು ದೂರು ದಾಖಲಿಸಿದ್ದಾರೆ.

Etv Bharatboy-assaulted-by-madrasa-teacher-in-dakshina-kannada
Etv Bharatಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ

ಉಳ್ಳಾಲ(ದಕ್ಷಿಣ ಕನ್ನಡ): ಬಾಲಕನೋರ್ವನಿಗೆ ಮದರಸಾದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ. ಮದರಸಾಗೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಪೋಷಕರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ :ಪಿಎಫ್​ಐ ಪ್ರಕರಣ.. ಎನ್​ಐಎ ಶೋಧಕಾರ್ಯಕ್ಕೆ ಅಡ್ಡಿಪಡಿಸಿದ ಜನ

ABOUT THE AUTHOR

...view details