ಬಂಟ್ವಾಳ:ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಮೇಲ್ಕಾರ್ ಮಾರ್ನಬೈಲ್ ಸಮೀಪ ಮಂಚಿಯ ಮಸೀದಿ ಬಳಿ ನಡೆದಿದೆ.
ಲಾರಿ ಓವರ್ ಟೇಕ್ ಮಾಡಲು ಹೋಗಿ ಅಪಘಾತ: ಬೈಕ್ ಸವಾರ ಸಾವು - Bhatvala latest news
ಬಂಟ್ವಾಳ ತಾಲೂಕಿನ ಮೇಲ್ಕಾರ್ ಮಾರ್ನಬೈಲ್ ಸಮೀಪ ಮಂಚಿಯ ಮಸೀದಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
Road accident
ನಿವಾಸಿ ಉನಾಯಿಸ್ (17) ಮೃತ ಬಾಲಕ. ಈತ ಬೈಕ್ನಲ್ಲಿ ಮಂಚಿಯ ಬಳಿ ಕಿರಿದಾದ ರಸ್ತೆಯಲ್ಲಿ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿತ್ತಿದ್ದ. ಈ ವೇಳೆ ಎದುರಿನಿಂದ ಬಂದ ಆಟೋಗೆ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್ಐ ರಾಜೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.