ಮಂಗಳೂರು:ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಇಂದು ಬೆಳಗ್ಗೆ ನಡೆದ ಬೈಕ್ ಅಪಘಾತವೊಂದರಲ್ಲಿ ಶಾಲಾ ಬಾಲಕ ಮೃತಪಟ್ಟಿದ್ದಾನೆ.
ಮಂಗಳೂರು: ಸ್ಕೂಟರ್ ಅಪಘಾತದಲ್ಲಿ ಬಾಲಕ ಸಾವು
ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸ್ಕೂಟರ್ ಅಪಘಾತ ಸಂಭವಿಸಿದ್ದು, 9ನೇ ತರಗತಿಯ ಬಾಲಕ ಮೃತಪಟ್ಟಿದ್ದಾನೆ.
ಸಾವಿಗೀಡಾದ ಬಾಲಕ
ಕೋಲ್ಪೆ ನಿವಾಸಿ ಗಿರಿಯಪ್ಪ ಎಂಬವರ ಪುತ್ರ, ನೆಲ್ಯಾಡಿ ಖಾಸಗಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಕಿರಣ್(15)ಮೃತ ಬಾಲಕ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಿರಣ್ ನನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.