ಕರ್ನಾಟಕ

karnataka

ETV Bharat / state

ಬೆಳ್ತಂಗಡಿಯಲ್ಲಿ ಉಯ್ಯಾಲೆಗೆ ಕುತ್ತಿಗೆ ಸಿಲುಕಿ ಬಾಲಕ ದಾರುಣ ಸಾವು

ಮನೆಯ ಅಂಗಳದಲ್ಲಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ.

boy dies
ಬಾಲಕ ದಾರುಣ ಸಾವು

By

Published : Jul 16, 2023, 10:51 PM IST

ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ.

ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದಾಳೆ. ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಬಾಲಕನ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೋಕಾಲಿ ಸೀರೆಗೆ ಕುತ್ತಿಗೆ ಸಿಲುಕಿ ಬಾಲಕಿ ಸಾವು : ಸೀರೆಯಲ್ಲಿ ಜೋಕಾಲಿ ಕಟ್ಟಿ ಆಡುತ್ತಿದ್ದಾಗ ಸಂದರ್ಭದಲ್ಲಿ ಬಾಲಕಿಯ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದಲ್ಲಿ ಮೇ 29 ರಂದು ನಡೆದಿತ್ತು. ಕೆಮ್ಮಣ್ಣುವಿನ ಲಕ್ಷ್ಮಿ ಪೂಜಾರಿ ಎಂಬವರ ಪುತ್ರಿ ಮಾನ್ವಿ (9) ಮೃತ ಬಾಲಕಿ ಎಂದು ಗುರುತಿಸಲಾಗಿತ್ತು. ಪಕ್ಕದ ಚಿಕ್ಕಪ್ಪನ ಮನೆಗೆ ಆಟವಾಡಲೆಂದು ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗಾಳಿಪಟದ ದಾರ ಕತ್ತಿಗೆ ಸಿಲುಕಿ ಯುವಕ ಸಾವು: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆಯ ನಿವಾಸಿ ರವಿ ಎಂಬ ಯುವಕ ಗಾಳಿಪಟದ ದಾರ ಕತ್ತಿಗೆ ಸಿಲುಕಿ ಸಾವಿಗೀಡಾಗಿದ್ದನು. ಗದಗ ಜಿಲ್ಲೆಯ ಡಂಬಳ ನಾಕಾ ಬಳಿ ಜೂನ್​ 3 ರಂದು ಭಾನುವಾರ ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ ಯುವಕನ ಕತ್ತು ಸೀಳಿತ್ತು. ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರು ದಿನಗಳ ಜೀವನ್ಮರಣದ ಹೋರಾಟ ನಡೆಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಜೂನ್​ 9 ರಂದು ಮೃತಪಟ್ಟಿದ್ದನು. ಗದಗ ಶಹರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ :Haveri crime: ಕುಡಿದ ಮತ್ತಿನಲ್ಲಿ ಜಗಳ.. ಗೋಡೆಗೆ ತಳ್ಳಿ ಮಾವನನ್ನು ಕೊಂದ ಅಳಿಯ!

ABOUT THE AUTHOR

...view details