ಮಂಗಳೂರು:ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 18 ಮಂದಿ ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಆಲಂಗಾರು ಸಮೀಪ ನಡೆದಿದೆ.
ಮೂಡುಬಿದಿರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: 18 ಮಂದಿಗೆ ಗಾಯ - ಖಾಸಗಿ ಬಸ್ ಅಪಘಾತ
ಕೊಲ್ಲೂರಿನಿಂದ ಮಂಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಬಸ್ ಆಲಂಗಾರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್ನಲ್ಲಿದ್ದ 18 ಮಂದಿಗೆ ಗಾಯಗಳಾಗಿವೆ.
ಬಸ್ ಪಲ್ಟಿ
ಕೊಲ್ಲೂರಿನಿಂದ ಮಂಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಬಸ್ ಆಲಂಗಾರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ 18 ಮಂದಿಗೆ ಗಾಯಗಳಾಗಿವೆ. ಈ ಪೈಕಿ ಮೂಡುಬಿದಿರೆಯ ಗಾಂಧಿನಗರದ ಸುಮಾ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.