ಮಂಗಳೂರು: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನ ನಿರ್ವಾಹಕನೋರ್ವ ಮಹಿಳಾ ಪ್ರಯಾಣಿಕರೊಬ್ಬರ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಸ್ನಲ್ಲಿ ಮಹಿಳೆ ಜೊತೆ ಕಂಡಕ್ಟರ್ ಅಸಭ್ಯ ವರ್ತನೆ ಆರೋಪ- ವಿಡಿಯೋ ವೈರಲ್ - ಮಹಿಳೆ ಜೊತೆ ಕಂಡಕ್ಟರ್ ಅಸಭ್ಯ ವರ್ತನೆ
ಕೆಎಸ್ಆರ್ಟಿಸಿ ಬಸ್ಸಿನ ನಿರ್ವಾಹಕನೋರ್ವ ಮಹಿಳಾ ಪ್ರಯಾಣಿಕರೊಬ್ಬರ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿರುವ ಆರೋಪ ಪ್ರಕರಣ ನಡೆದಿದೆ. ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
![ಬಸ್ನಲ್ಲಿ ಮಹಿಳೆ ಜೊತೆ ಕಂಡಕ್ಟರ್ ಅಸಭ್ಯ ವರ್ತನೆ ಆರೋಪ- ವಿಡಿಯೋ ವೈರಲ್ Bus Conductor Miss Behave with lady Passenger](https://etvbharatimages.akamaized.net/etvbharat/prod-images/768-512-6106691-thumbnail-3x2-hrs.jpg)
ಪುತ್ತೂರು ಕೆಎಸ್ಆರ್ಟಿಸಿ ಡಿಪೋದ ನಿರ್ವಾಹಕ ಯೂಸುಫ್ ಅಲಿ ತಲ್ಲೂರ್ ಎಂಬಾತನೇ ಪ್ರಯಾಣಿಕ ಮಹಿಳೆಯೊಂದಿಗೆ ಅಸಭ್ಯ ವರ್ತಿಸಿರುವ ಆರೋಪಿ. ಜನವರಿ 16ರ ಭಾನುವಾರ ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಮಹಿಳೆ ಕುಳಿತಿದ್ದ ಸೀಟಿನಲ್ಲಿ ಬಂದು ಕುಳಿತಿದ್ದ ನಿರ್ವಾಹಕ ಯೂಸುಫ್ ಅಲಿ, ಇತರರಿಗೆ ಗೊತ್ತಾಗದ ರೀತಿಯಲ್ಲಿ ಮಹಿಳೆಯ ಮೈಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದ. ಈ ವೇಳೆ ಕಂಡಕ್ಟರ್ ವರ್ತನೆಯನ್ನು ಆತನಿಗೆ ಗೊತ್ತಾಗದ ರೀತಿಯಲ್ಲಿ ಮಹಿಳೆ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯ ಕುರಿತು ಪ್ರಯಾಣಿಕ ಮಹಿಳೆ ನೀಡಿರುವ ದೂರು ಆಧರಿಸಿ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಬಸ್ ನಿರ್ವಾಹಕನನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ನಿರ್ವಾಹಕ ಇತ್ತೀಚೆಗಷ್ಟೇ ಧರ್ಮಸ್ಥಳ ಕೆಎಸ್ಆರ್ಟಿಸಿ ಡಿಪೋದಿಂದ ಶಿಕ್ಷಾರ್ಹ ವರ್ಗಾವಣೆಗೊಂಡು ಪುತ್ತೂರು ಡಿಪೋಗೆ ಬಂದಿದ್ದನೆಂದು ತಿಳಿದು ಬಂದಿದೆ. ಈ ಹಿಂದೆ ಈತ ಉಜಿರೆಯಲ್ಲಿ ಪ್ರಯಾಣಿಕ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ್ದ ಎಂದು ಹೇಳಲಾಗ್ತಿದೆ.