ಕರ್ನಾಟಕ

karnataka

ETV Bharat / state

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ದಿಢೀರ್​ ಎದೆನೋವು: ಚಾಲಕ, ನಿರ್ವಾಹಕ ಪ್ರಯಾಣಿಕಳ ಪ್ರಾಣ ಉಳಿಸಿದ್ದು ಹೇಗೆ? - ಮಹಿಳೆಗೆ ಎದೆನೋವು: ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

ಮಹಿಳಾ ಪ್ರಯಾಣಿಕವೋರ್ವರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಬಸ್ ಚಾಲಕ ಹಾಗೂ ನಿರ್ವಾಹಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ತಲಪಾಡಿಯ ಕಿನ್ಯಾ ಎಂಬಲ್ಲಿಂದ ಮಂಗಳೂರಿಗೆ ಬರುತ್ತಿದ್ದ ಮಹೇಶ್ ಎಂಬ ಖಾಸಗಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.

Bus Driver and conductor help
ಮಹಿಳೆಗೆ ಎದೆನೋವು: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

By

Published : Feb 24, 2020, 9:07 PM IST

ಮಂಗಳೂರು: ಮಹಿಳೆವೋರ್ವರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಿಢೀರ್ ಎದೆ ನೋವು ಕಾಣಿಸಿಕೊಂಡಿತ್ತು. ಆಗ ತಕ್ಷಣ ಬಸ್ ಚಾಲಕ ಹಾಗೂ ನಿರ್ವಾಹಕ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ ಅವರ ಪ್ರಾಣ ಉಳಿಸಿದ್ದಾರೆ.

ನಗರದ ತಲಪಾಡಿಯ ಕಿನ್ಯಾ ಎಂಬಲ್ಲಿಂದ ಮಂಗಳೂರಿಗೆ ಬರುತ್ತಿದ್ದ ಮಹೇಶ್ ಎಂಬ ಖಾಸಗಿ ಬಸ್ಸಿನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಅವರಿಗೆ ದಿಢೀರ್​ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಕ್ಷಣ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್ ಬಸ್​​ನ್ನು ಯಾವುದೇ ತಂಗುದಾಣಗಳಲ್ಲಿ ನಿಲ್ಲಿಸದೆ ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಈ ಇಬ್ಬರ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಾಯದ ಮುನ್ಸೂಚನೆ ಅರಿತು ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್​ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.

ABOUT THE AUTHOR

...view details