ಮಂಗಳೂರು: ಕೇರಳ ರಾಜ್ಯದ ಮಂಜೇಶ್ವರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಹಾಗಾಗಿ ಕೇರಳ ಕರ್ನಾಟಕ ಗಡಿ ಭಾಗದ ಮಂಜೇಶ್ವರದ ಹತ್ತಿರದ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮದ್ಯಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ.
ಕೇರಳ ಮಂಜೇಶ್ವರದಲ್ಲಿ ಉಪಚುನಾವಣೆ: ದ. ಕನ್ನಡ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ - ಕೇರಳದ ಮಂಜೇಶ್ವರದಲ್ಲಿ ಉಪಚುನಾವಣೆ
ಕೇರಳದ ಮಂಜೇಶ್ವರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆ ಕರ್ನಾಟಕ ಹಾಗೂ ಕೇರಳ ಗಡಿಭಾಗದ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಮದ್ಯಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.
ದ.ಕ ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು ತಾಲೂಕು ಪ್ರದೇಶಗಳ 5 ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿ, ಬಾರ್ಗಳನ್ನು ಅಕ್ಟೋಬರ್ 19 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 21 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಅಕ್ಟೋಬರ್ 24 ರಂದು ನಡೆಯಲಿರುವ ಮತಎಣಿಕೆಯ ದಿನದಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ.
ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳಿಗೆ ಮದ್ಯ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಮಾರಾಟ ಕೇಂದ್ರಗಳನ್ನು ಮುಚ್ಚಲು ಹಾಗೂ ಈ ದಿನಗಳಂದು ನಿಷೇಧಿಸಿರುವ ಪ್ರದೇಶಗಳಲ್ಲಿ ಯಾವುದೇ ಹೋಟೆಲ್ಗಳಲ್ಲಾಗಲೀ, ನಾನ್ ಪ್ರೊಪ್ರೈಟರ್ಗಳಲ್ಲಿ, ಸ್ಟಾರ್ ಹೋಟೆಲ್‍ಗಳಲ್ಲಿ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶಿಸಿದ್ದಾರೆ.