ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳ ದಾಳಿಗೊಳಗಾಗಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯ ಸಂಬಂಧಿಕರನ್ನು ರಾಜಿಗೆಂದು ಕರೆದು ತಲವಾರಿನಿಂದ ಹಲ್ಲೆ ಮಾಡಿದ ಘಟನೆ ಮಂಗಳೂರಿನ ಯುನಿಟಿ ಆಸ್ಪತ್ರೆ ಬಳಿ ನಡೆದಿದೆ.
ಈ ಘಟನೆಯಲ್ಲಿ ನೌಶದ್(30) ಎಂಬಾತ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇತ್ತೀಚೆಗೆ ಗುರುಪುರ ಕೈಕಂಬದ ವೆನ್ಜ್ ಅಬ್ದುಲ್ಲಾ ಎಂಬವರನ್ನು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿದ್ದರು. ಅವರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.