ಕರ್ನಾಟಕ

karnataka

ETV Bharat / state

ಪುತ್ತೂರು: ಗಾಂಜಾ ಸಾಗಿಸುತ್ತಿದ್ದ ಯುವಕನ ಬಂಧನ - ಪುತ್ತೂರು ಗಾಂಜಾ ಸಾಗಾಟ

ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ, ಆತನಿಂದ 40 ಸಾವಿರ ಮೌಲ್ಯದ ಎರಡು ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

arrest
ಯುವಕನ ಬಂಧನ

By

Published : Jan 18, 2021, 1:18 PM IST

ಪುತ್ತೂರು:ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಯುವಕನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ, 40 ಸಾವಿರ ಮೌಲ್ಯದ ಎರಡು ಕೆ.ಜಿ ಗಾಂಜಾ ಪತ್ತೆಯಾಗಿದೆ.

ಆರೋಪಿ ಸವಣೂರು ಗ್ರಾಮದ ನಿವಾಸಿ ನವಾಜ್ (30)ನನ್ನು ಪೊಲೀಸರು ಬಂಧಿಸಿದ್ದು, ಆತನ ಬೈಕನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details