ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಿಗಳ ಕಾರಿಗೆ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು ಸೇರಿದಂತೆ ಎಂಟು ಮಂದಿ ಗಾಯಗೊಂಡಿರುವ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿನ ಕೈಕಂಬದ ಬಳಿ ಇಂದು ಸಂಭವಿಸಿದೆ.
ಕಾರುಗಳ ಮುಖಾಮುಖಿ ಡಿಕ್ಕಿ: ಮಗು ಸೇರಿದಂತೆ ಎಂಟು ಮಂದಿಗೆ ಗಾಯ - undefined
ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಗಳ ಕಾರು ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿದಂತೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
![ಕಾರುಗಳ ಮುಖಾಮುಖಿ ಡಿಕ್ಕಿ: ಮಗು ಸೇರಿದಂತೆ ಎಂಟು ಮಂದಿಗೆ ಗಾಯ](https://etvbharatimages.akamaized.net/etvbharat/prod-images/768-512-3604283-thumbnail-3x2-chai.jpg)
ಕಾರುಗಳ ಮುಖಾಮುಖಿ ಡಿಕ್ಕಿ
ದುರ್ಘಟನೆಯಲ್ಲಿ ಮಗು ಹಾಗೂ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.