ಕರ್ನಾಟಕ

karnataka

ETV Bharat / state

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಮೂವರಿಗೆ ಗಾಯ! - ಸುಳ್ಯ ಕಾರ್ ಅಪಘಾತ ಸುದ್ದಿ

ಸುಳ್ಯ ಕಡೆಯಿಂದ ಪುತ್ತೂರಿಗೆ ಚಲಿಸುತ್ತಿದ್ದ ಕಾರೊಂದು, ಡ್ರೈವರ್ ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಓಡಬಾಯಿ ಬಳಿಯ ಅಗ್ನಿಶಾಮಕ ಠಾಣೆಯ ಮುಂಭಾಗದಲ್ಲಿ ನಡೆದಿದೆ.

Car accident
Car accident

By

Published : Jul 18, 2020, 4:42 PM IST

ಸುಳ್ಯ :ಓಡಬಾಯಿ ಬಳಿಯ ಅಗ್ನಿಶಾಮಕ ಠಾಣೆಯ ಮುಂಭಾಗದಲ್ಲಿ ಆಲ್ಟೋ ಕಾರೊಂದು ಡ್ರೈವರ್‌ನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ‌ ಪರಿಣಾಮ ಕಾರು ಮಗುಚಿ ಬಿದ್ದು ಸವಾರರು ಗಾಯಗೊಂಡಿದ್ದಾರೆ.

ಸುಳ್ಯ ಕಡೆಯಿಂದ ಪುತ್ತೂರಿಗೆ ಚಲಿಸುತ್ತಿದ್ದ ಕಾರು ಇದಾಗಿದ್ದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ‌ ರಭಸಕ್ಕೆ ಕಾರು ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿ ಮೂವರು ಗಾಯಗೊಂಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಸದ್ಯ ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details