ಕರ್ನಾಟಕ

karnataka

ETV Bharat / state

ಬೈಕಿಗೆ ಡಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಕಾರು ಚಾಲಕ - ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು - ದಕ್ಷಿಣ ಕನ್ನಡ

ಬೆಂಗಳೂರು ಮೂಲದ ಯುವಕರು ಪ್ರಯಾಣಿಸುತ್ತಿದ್ದ ಈ ಕಾರು ಮಂಜೇಶ್ವರ-ಸುಬ್ರಹ್ಮಣ್ಯ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಕಾರು ಡಿಕ್ಕಿ

By

Published : Apr 28, 2019, 8:55 PM IST

ಮಂಗಳೂರು: ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಅರಂಪಾಡಿ ಬಳಿಯ ತಿರುವಿನಲ್ಲಿ ನಡೆದಿದೆ.

ರಾಮಚಂದ್ರ ಮಾದನಮನೆ ಎಂಬುವರು ಗಾಯಗೊಂಡಿದ್ದಾರೆ.ಘಟನೆ ನಡೆದ ತಕ್ಷಣ ಪರಾರಿಯಾಗಲು ಯತ್ನಿಸಿದ ಕಾರನ್ನು ಸ್ಥಳೀಯರು ತಡೆದಿದ್ದರು. ಬೆಂಗಳೂರು ಮೂಲದ ಯುವಕರು ಪ್ರಯಾಣಿಸುತ್ತಿದ್ದ ಈ ಕಾರು ಮಂಜೇಶ್ವರ-ಸುಬ್ರಹ್ಮಣ್ಯ ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಪರಾರಿಯಾಗಲು ಯತ್ನಿಸಿದ ತಕ್ಷಣ ಬೆನ್ನಟ್ಟಿದ ಸ್ಥಳೀಯರು ಕುಲ್ಕುಂದ ಬಳಿ ಕಾರನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಗಾಯಾಳು ರಾಮಚಂದ್ರ ಅವರನ್ನು ಸುಬ್ರಹ್ಮಣ್ಯ ಸರ್ಕಾರಿ‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details