ಕಡಬ:ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಕಡಬ ಕಡೆಗೆ ಬರುತ್ತಿದ್ದಾಗ ಪದವು - ಬಲ್ಯ ನಡುವೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬುವರ ಪುತ್ರ ನವೀನ್ ಮಾರ್ಟಿಸ್ (30) ಮೃತರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮೃತರ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸಹೋದರಿ ಸುಶ್ಮಾ ಮಾರ್ಟಿಸ್ ಹಾಗೂ ಪತ್ನಿ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.