ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ನದಿ ತೀರಕ್ಕೆ ಬಿದ್ದ ಘಟನೆ ನಗರದ ಪಾವಂಜೆ ಸೇತುವೆ ಬಳಿ ಇಂದು ಮುಂಜಾನೆ ನಡೆದಿದೆ.
ಪಾವಂಜೆ ಸೇತುವೆಯ ಬಳಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ನಂದಿನಿ ನದಿಯ ಬದಿಗೆ ಬಿದ್ದಿದೆ. ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರೂ ಅದೃಷ್ಟವಶಾತ್ ಪಾರಾಗಿದ್ದಾರೆ.

ಓದಿ:ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸುವುದೇ ಸಮಸ್ಯೆ: ಟ್ರಾಫಿಕ್ ನಿಯಂತ್ರಿಸಲು ಪೊಲೀಸರ ಹರಸಾಹಸ
ಸುರತ್ಕಲ್ ಕಾಟಿಪಳ್ಳ ನಿವಾಸಿ ಅಶ್ರಫ್ ಮತ್ತು ಆತನ ಸ್ನೇಹಿತ ಅರಾಂದ್ ಎಂಬಲ್ಲಿಗೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಕಾರು ನದಿಗೆ ಬೀಳುತ್ತಿದ್ದಂತೆ ಇಬ್ಬರು ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಾಕ್ಕಾಗಮಿಸಿ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.