ಕರ್ನಾಟಕ

karnataka

ETV Bharat / state

ಚಾರ್ಮಾಡಿ ಕಂದಕಕ್ಕೆ ಉರುಳಿಬಿದ್ದ ಕಾರು.. ಉಜಿರೆ ಗ್ರಾ.ಪಂ ಅಧ್ಯಕ್ಷೆ ಸಹಿತ ಹಲವರಿಗೆ ಗಾಯ, ಓರ್ವ ಮಹಿಳೆ ಸಾವು - ಈಟಿವಿ ಭಾರತ ಕನ್ನಡ

ಚಾಲಕನ ನಿಯಂತ್ರಣ ತಪ್ಪಿ 100ಮೀ ಆಳದ ಕಂದಕಕ್ಕೆ ಉರುಳಿದ ಕಾರು - ​ಉಜಿರೆ ಗ್ರಾಮ ಪಂಚಾಯತ ಅಧ್ಯಕ್ಷೆ ಸೇರಿ ಹಲವರಿಗೆ ಗಾಯ - ಓರ್ವ ಮಹಿಳೆ ಸಾವು

ಕಂದಕಕ್ಕೆ ಉರುಳಿದ ಬಿದ್ದ ಕಾರು
ಕಂದಕಕ್ಕೆ ಉರುಳಿದ ಬಿದ್ದ ಕಾರು

By

Published : Apr 10, 2023, 9:11 AM IST

ಉಜಿರೆ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಬಿದ್ದು ಹಲವರಿಗೆ ಗಂಭೀರ ಗಾಯಗಳಾಗಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಉಜಿರೆ ಗ್ರಾಮ ಪಂಚಾಯತ್​ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು‌ ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದಿದೆ.

ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಪುಷ್ಪಾವತಿ ಆರ್.ಶೆಟ್ಟಿ ಸಹಿತ ಪುತ್ರಿ ಪೂರ್ಣಿಮಾ ಶೆಟ್ಟಿ ಮೊಮ್ಮಕ್ಕಳಾದ ಸಮೃದ್ಧ್ ಹಾಗೂ ಸಾಕ್ಷಿ ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ, ಚಾಲಕ ಅರುಣ್ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮ ಇವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಸರೋಜಿನಿ ಶೆಟ್ಟಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನದಿಯಲ್ಲಿ ಮುಳಗಿ ತಂದೆ ಮಗ ಸಾವು ಚಿಕ್ಕಮಗಳೂರು :ಇಲ್ಲಿಯ ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ತಂದೆ ಮತ್ತು ಮಗ ಮುಳುಗಿ ಸಾವನ್ನಪ್ಪಿರುವ ಘಟನೆ ಏ.8ರಂದು ನಡೆದಿತ್ತು. ಹಂಡುಗುಳಿ ಗ್ರಾಮದ ಲೋಕೇಶ್(40 ) ಮತ್ತು ಸಾತ್ವಿಕ್(13) ಮೃತರು ಎಂದು ತಿಳಿದು ಬಂದಿದೆ. ಮೃತರು ಸುಗ್ಗಿ ಹಬ್ಬಕ್ಕೆಂದು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯ ಸಮೀಪದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಸಂಬಂಧಿಕರೊಂದಿಗೆ ತೆರಳಿದ್ದರು. ನದಿಯ ಬಂಡೆಯ ಮೇಲೆ ನಿಂತಿದ್ದ ಸಾತ್ವಿಕ್ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ಲೋಕೇಶ್ ನದಿಗೆ ಹಾರಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಫಾರ್ಚುನರ್ ಕಾರುಗಳಿಗೆ ಕನ್ನ; ಕದ್ದ ವಾಹನಕ್ಕೆ ಎಂಎಲ್ಸಿ ಕಾರು ನಂಬರ್ ಬಳಸಿ ಸಿಕ್ಕಿಬಿದ್ದರು!

ABOUT THE AUTHOR

...view details