ಕರ್ನಾಟಕ

karnataka

ETV Bharat / state

ಕಿನ್ನಿಗೋಳಿಯಲ್ಲಿ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ: ಭಯಾನಕ ದೃಶ್ಯ! - ಮಹಿಳೆಗೆ ಕಾರು ಡಿಕ್ಕಿ

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Car hits pedestrian woman at Mangalore
ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ

By

Published : Nov 4, 2022, 1:04 PM IST

ಮಂಗಳೂರು: ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ: ಸಿಸಿಟಿವಿ ದೃಶ್ಯ

ಕಿನ್ನಿಗೋಳಿ ಚರ್ಚ್ ಕಡೆಯಿಂದ ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ತರಕಾರಿ ಹಿಡಿದುಕೊಂಡು ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ತಳ್ಳಲ್ಪಟ್ಟು ಗಂಭೀರವಾಗಿ ಗಾಯಗೊಂಡರು.

ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾರು-ಬಸ್​​ ನಡುವೆ ಭೀಕರ ರಸ್ತೆ ಅಪಘಾತ: 11 ಮಂದಿ ದುರ್ಮರಣ

ABOUT THE AUTHOR

...view details