ಮಂಗಳೂರು (ದಕ್ಷಿಣ ಕನ್ನಡ) :ಕಾಫಿ ಡೇ ಮಾಲೀಕ ಸಿದ್ದಾರ್ಥ್ ಸೇರಿ ಅನೇಕರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಸೂಸೈಟ್ ಸ್ಟಾಟ್ ಎಂದೇ ಕುಖ್ಯಾತಿಗೊಳಗಾಗಿದ್ದ ಮಂಗಳೂರು-ಕೇರಳ ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ಸೇತುವೆಗೆ ತಡೆ ಬೇಲಿ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ನೇತ್ರಾವತಿ ಸೇತುವೆಯಿಂದ ಈವರೆಗೆ 20 ಮಂದಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆ ಪೈಕಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರನ್ನು ರಕ್ಷಿಸಿಸಲಾಗಿದೆ. ಹೀಗಾಗಿ, ಶಾಸಕ ವೇದವ್ಯಾಸ್ ಕಾಮತ್ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ಅಹಿತಕರ ಘಟನೆಗಳಿಗೆ ಕಡಿವಾಣ ಹಾಕಲು ವಿವಿಧ ಕ್ರಮಗಳನ್ನು ಕೈಗೊಂಡಿದ್ದಾರೆ.
ಸುಮಾರು 800 ಮೀ. ಉದ್ದದ ಸೇತುವೆಯಿಂದ ಯಾರೂ ನದಿಗೆ ಹಾರದಂತೆ ತಡೆಯಲು ಸೇತುವೆಯ ನಾಲ್ಕೂ ಕಡೆಗಳಲ್ಲಿ ಕಬ್ಬಿಣದ ತಡೆಬೇಲಿ ಅಳವಡಿಸಲಾಗಿದೆ. ಅಲ್ಲದೆ, ಐದು ಲಕ್ಷ ರೂ. ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.