ಮಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ವಿಚಾರಣೆ ನಡೆಸಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಡ್ರಗ್ಸ್ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಅದು ವಿವಾದವಾದ ಬೆನ್ನಲ್ಲೇ ವರ್ಗಾವಣೆ ತಡೆ ಹಿಡಿಯಲಾಗಿತ್ತು. ಇದೀಗ ಮತ್ತೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಡ್ರಗ್ಸ್ ಪ್ರಕರಣ: ಅನುಶ್ರೀ ವಿಚಾರಣೆ ನಡೆಸಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮತ್ತೆ ವರ್ಗಾವಣೆ! - ನಿರೂಪಕಿ ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್ಪೆಕ್ಟರ್ ವರ್ಗಾವಣೆ
ಡ್ರಗ್ಸ್ ಪ್ರಕರಣದಲ್ಲಿ ನಟಿ ಹಾಗೂ ಜನಪ್ರಿಯ ನಿರೂಪಕಿ ಅನುಶ್ರೀಯನ್ನು ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಮತ್ತೆ ಆದೇಶ ಹೊರಡಿಸಿದೆ.
![ಡ್ರಗ್ಸ್ ಪ್ರಕರಣ: ಅನುಶ್ರೀ ವಿಚಾರಣೆ ನಡೆಸಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮತ್ತೆ ವರ್ಗಾವಣೆ! ccb inspecter inspecter shivprakash transffer](https://etvbharatimages.akamaized.net/etvbharat/prod-images/768-512-9566030-thumbnail-3x2-drug.jpg)
ಡ್ರಗ್ಸ್ ಪ್ರಕರಣ ವಿಚಾರಣೆ ನಡೆಸಿದ್ದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮತ್ತೆ ವರ್ಗಾವಣೆ
ಮಂಗಳೂರು ಸಿಸಿಬಿಗೆ ಇನ್ಸ್ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಸಿಸಿಬಿ ಸಬ್ಇನ್ಸ್ಪೆಕ್ಟರ್ ಕಬ್ಬಾಳ್ ರಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.