ಮಂಗಳೂರು: ನಗರದ ಎಂ.ಜಿ.ರಸ್ತೆಯಲ್ಲಿರುವ ಓನೆಕ್ಸ್ ಪಬ್ ಮೇಲೆ ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಓನೆಕ್ಸ್ ಪಬ್ ವಿರುದ್ಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಓನೆಕ್ಸ್ ಪಬ್ ಅನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಕಾಲ ತೆರೆಯಲಾಗುತ್ತಿದೆ. ಅಗತ್ಯಕ್ಕಿಂತಲೂ ಹೆಚ್ಚಿನ ಶಬ್ದದ ಧ್ವನಿವರ್ಧಕಗಳನ್ನು ಬಳಸಿ ಸುತ್ತಮುತ್ತಲಿನ ಪರಿಸರಕ್ಕೆ ಕಿರಿಕಿರಿ ಉಂಟು ಮಾಡಲಾಗುತ್ತಿದೆ. ಪಬ್ನಿಂದ ಹೊರ ಬರುವವರು ಸಾರ್ವಜನಿಕರೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿದ್ದು, ಅಕ್ಕಪಕ್ಕದ ನಿವಾಸಿಗಳಿಗೆ, ಸುತ್ತಮುತ್ತ ಓಡಾಡುವ ವಿದ್ಯಾರ್ಥಿಗಳಿಗೆ ಹಾಗೂ ಸಮೀಪದಲ್ಲೇ ಇರುವ ದೇವಸ್ಥಾನಗಳಿಗೆ ಭಕ್ತರು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿದೆ ಎಂಬ ದೂರಿನ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ.
ಓನೆಕ್ಸ್ ಪಬ್ ಮೇಲೆ ಸಿಸಿಬಿ ಪೊಲೀಸರ ದಾಳಿ ಇನ್ನು ದಾಳಿ ವೇಳೆ ಪೊಲೀಸರು ಧ್ವನಿವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.