ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿಯನ್ನು ಕೊಂದ ದೇಶದ್ರೋಹಿಯನ್ನು ಮಹಾತ್ಮ ಎಂದು ಬಣ್ಣಿಸುವ ಮನಸ್ಥಿತಿಯುಳ್ಳ ಪಕ್ಷ ಅಧಿಕಾರದಲ್ಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸೇರಿದಂತೆ ಹುತಾತ್ಮರ ಪುಣ್ಯತಿಥಿ ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜನರಿಗೆ ತಿಳಿಸುತ್ತಿದೆ.