ಕರ್ನಾಟಕ

karnataka

ETV Bharat / state

ಜೂ. 21ರಂದು ಸೂರ್ಯಗ್ರಹಣ....ಧರ್ಮಸ್ಥಳ ದೇವರ ದರ್ಶನಕ್ಕೆ ಸಮಯ ಬದಲಾವಣೆ - Darmastala temple latest news

ಜೂ.21 ರಂದು ಈ ವರ್ಷದ ಮೊದಲ ಸೂರ್ಯಗ್ರಹಣ ಇರುವುದರಿಂದ, ಪವಿತ್ರ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ದೇವರ ದರ್ಶನಕ್ಕೆ ಸಮಯ ಬದಲಾವಣೆ ಮಾಡಲಾಗಿದೆ.

Darmastala temple
Darmastala temple

By

Published : Jun 14, 2020, 7:51 PM IST

ಬೆಳ್ತಂಗಡಿ: ಜೂ.21 ರಂದು ಈ ವರ್ಷದ ಮೊದಲ ಸೂರ್ಯಗ್ರಹಣ ಇರುವುದರಿಂದ, ಪವಿತ್ರ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಅಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಜೂ.21 ರಂದು ಬೆಳಗ್ಗೆ 5-30 ರಿಂದ 9 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶವಿದೆ. ಬೆಳಗ್ಗೆ 6 ಗಂಟೆಗೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9-30ರವರೆಗೆ ಮಹಾಪೂಜೆ ಜರುಗಲಿದೆ. ನಂತರ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರಯಲಿದ್ದು, ರಾತ್ರಿ 8-30 ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪಾರುಪತ್ಯಗಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details