ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ನಾನು ಬದ್ಧ. ನನಗೆ ಸರಕಾರ ನೀಡಿರುವ ಅಧಿಕಾರಕ್ಕೆ ನ್ಯಾಯ ದೊರಕಿಸಿ ಕೊಡುವ ಕಾರ್ಯ ಮಾಡುತ್ತೇನೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೊಸ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಭರವಸೆ ನೀಡಿದರು.
ಕರಾವಳಿಯ ಮೂರು ಜಿಲ್ಲೆಯ ಎಲ್ಲಾ ಸಂಸದರು, ಶಾಸಕರುಗಳು ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನವನ್ನು ರಾಜ್ಯ ಸರಕಾರದಿಂದ ಕೊಡಿಸಿದ್ದಲ್ಲಿ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿರುವ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಿದೆ ಎಂದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ನಿರ್ಗಮಿತ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಕೊರೊನಾ ಕಾಲದಲ್ಲಿ ಪ್ರಾಧಿಕಾರದ ಅಧ್ಯಕ್ಷನಾಗಿ ನೇಮಕಗೊಂಡಾಗ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗಿಲ್ಲ. ಕೇವಲ ಒಂದು ವರ್ಷವಷ್ಟೇ ಕೆಲಸ ಮಾಡುವ ಅವಕಾಶ ದೊರಕಿತು. 2022-23ರ ಅವಧಿಯಲ್ಲಿ ಮೂರು ಜಿಲ್ಲೆಗಳಲ್ಲಿ ತೂಗು ಸೇತುವೆಗಳು, ಉದ್ಯಾನವನಗಳು, ಶಾಲಾ, ಅಂಗನವಾಡಿ ಕೊಠಡಿಗಳು, ರಂಗಮಂದಿರಗಳ ನಿರ್ಮಾಣಕ್ಕೆ 35 ಕೋಟಿ ರೂ.ಗಳ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ಕೆಲಸಗಳು ಆರಂಭಗೊಂಡಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ