ಬಂಟ್ವಾಳ:ಬುಧವಾರ ಬೆಳಗ್ಗೆ ಇಬ್ಬರು ಮಕ್ಕಳು ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಹಿರಿಯ ಪ್ರಾಥಮಿಕ ಶಾಲೆಗೆ ತರಳುತ್ತಿದ್ದಾಗ ಕಾರೊಂದರಲ್ಲಿ ಬಂದ ವ್ಯಕ್ತಿ ಎಳೆದೊಯ್ಯಲು ಯತ್ನಿಸಿರುವ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಮಕ್ಕಳ ಅಂಗಿಯ ಗುಬ್ಬಿಗಳು ಕಿತ್ತು ಹೋಗಿದ್ದರಿಂದ ತಪ್ಪಿಸಿಕೊಂಡು ಬಚಾವ್ ಆಗಿದ್ದಾರೆ. ಘಟನೆಯ ಕುರಿತು ಮಕ್ಕಳು ತಕ್ಷಣ ಪೋಷಕರಿಗೆ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಂಟ್ವಾಳದಲ್ಲಿ ಮಕ್ಕಳ ಅಪಹರಣ ಯತ್ನ: ಪೊಲೀಸರಿಂದ ತನಿಖೆ ಚುರುಕು - ETv Bharat kannada news
ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಕಾರಿನಲ್ಲಿ ಬಂದ ವ್ಯಕ್ತಿ ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ.
ಬಂಟ್ವಾಳದಲ್ಲಿ ಮಕ್ಕಳ ಕಿಡ್ನ್ಯಾಪ್ ಯತ್ನ ವಿಫಲ